ಫೆ.೧೪: ಶಾಸಕ ಸಂಗಮೇಶ್ ಕುಟುಂಬ ದಬ್ಬಾಳಿಕೆ ಖಂಡಿಸಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ: ಶಾರದಾ ಅಪ್ಪಾಜಿಗೌಡ

ಶಿವಮೊಗ್ಗ : ಮಹಿಳಾ ಅಧಿಕಾರಿಯ ಮೇಲೆ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಪುತ್ರನ ದೌರ್ಜನ್ಯ ಖಂಡಿಸಿ ಫೆ. ೧೪ರ ಶುಕ್ರವಾರ ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ ಎಂದು ಭದ್ರಾವತಿ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಹಾಗೂ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾವತಿಯಲ್ಲಿ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಮತ್ತು ಅವರ ಪುತ್ರರು ಮತ್ತು ಸಹೋದರರ ಆರ್ಭಟ, ದೌರ್ಜನ್ಯ ಮಿತಿ ಮೀರಿದೆ. ಅವರ ಈ ಅಟ್ಟಹಾಸವನ್ನು ತಡೆಯುವವರು ಯಾರೂ ಇಲ್ಲದಂತಾಗಿದೆ. ಇಡೀ ಭದ್ರಾವತಿ ಕ್ಷೇತ್ರದಲ್ಲಿ ಗಾಂಜಾ, ಇಸ್ಪೀಟ್, ಅಕ್ರಮ ಮರಳು ದಂಧೆ, ಮೀಟರ್ ಬಡ್ಡಿ ದಂಧೆ, ಅಕ್ರಮ ನಾಟಾ ಸಾಗಣೆ ಸೇರಿದಂತೆ ಹಲವು ಅಕ್ರಮ ಚಟುವಟಿಕೆ ನಿರಂತರವಾಗಿ ನಡೆಯುತ್ತಿವೆ. ಈ ಎ ಅಕ್ರಮ ಗಳು ಶಾಸಕರ ನೆರಳಿನಲ್ಲಿಯೇ ನಡೆಯುತ್ತಿವೆ ಎಂದು ಗಂಭೀರ ಆರೋಪ ಮಾಡಿದರು.
ಇದಕ್ಕೆ ಸಾಕ್ಷಿ ಎಂಬಂತೆ ಅಕ್ರಮ ಮರಳು ಸಾಗಣೆಗೆ ಸಂಬಂಧಿಸಿದಂತೆ ಅದನ್ನು ತಡೆಯಲು ಬಂದ ಗಣಿ ಮತ್ತು ಭೂ ವಿeನ ಇಲಾಖೆಯ ಮಹಿಳಾ ಅಧಿಕಾರಿಗೆ ಭದ್ರಾವತಿಯ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿzರೆ. ಹೀಗಾದರೆ ಅಧಿಕಾರಿಗಳು ಏನು ಮಾಡಲು ಸಾಧ್ಯ? ಮಹಿಳೆ ಎಂದು ನೋಡದೇ ಅಶ್ಲೀಲವಾಗಿ ಅವರು ನಿಂದಿಸಿ, ಬೆದರಿಸಿದ್ದಾರೆ. ಈ ಎಲ್ಲದರ ಹಿಂದೆ ಶಾಸಕರ ಕುಮ್ಮಕ್ಕು ಇದೆ. ಅವರು ಈ ಕೂಡಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಧ್ಯಕ್ಷ ಕಡಿದಾಳ್ ಗೋಪಾಲ್, ಜೆಡಿಎಸ್ ರಾಜ್ಯ ಕಾರ್ಯದರ್ಶಿ ರಾಕೇಶ್ ಡಿಸೋಜ, ಜಿ ಯುವ ಘಟಕದ ಕಾರ್ಯಾಧ್ಯಕ್ಷ ಎಸ್. ಎಲ್. ನಿಖಿಲ್, ರೈತ ಘಟಕದ ಜಿಲ್ಲಾಧ್ಯಕ್ಷ ದ್ಯಾನೇಶಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ದೀಪಕ್ ಸಿಂಗ್, ಪ್ರಮುಖರಾದ ನಾಗೇಶ್ ನಾಯ್ಕ, ಪ್ರೇಮ್ ಕುಮಾರ್, ಸುನಿಲ್, ಲೋಹಿತ್, ನಿರಂಜನ್, ರಾಘವೇಂದ್ರ ಮೊದಲಾದವರು ಉಪಸ್ಥಿತರಿದ್ದರು.