ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಜೆಡಿಎಸ್‌ನ ಪ್ರಚಾರ ಸಮಿತಿ ಅಧ್ಯಕ್ಷ, ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಕುರುಬ ಸಮಾಜದ ಹಿರಿಯ ಮುಖಂಡರಾದ ಕೆ.ಸಿದ್ದಪ್ಪ (ಸೀಗೇಟಿ ಸಿದ್ದಪ್ಪ) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೀಗೇಟಿಯ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಬಂದು ಬಳಗ ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಅಗಲಿದ್ದಾರೆ.
ಸಂತಾಪ: ಜಿಲ್ಲಾ ಜೆಡಿಎಸ್‌ನ ಪ್ರಚಾರ ಸಮಿತಿ ಅಧ್ಯಕ್ಷರಾದ ಕೆ.ಸಿದ್ದಪ್ಪ (ಸೀಗೇಟಿ ಸಿದ್ದಪ್ಪ) ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವರೂ ಆದ ಹೆಚ್.ಡಿ. ಕುಮಾರಸ್ವಾಮಿ, ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕಿ ಶಾರದಾ ಪೂರ್‍ಯಾನಾಯ್ಕ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶಾರದಾ ಅಪ್ಪಾಜಿಗೌಡ, ಓಂಕಾರಪ್ಪ, ರಾಜ್ಯ ಕಾರ್ಯದರ್ಶಿ ಅ. ರಾಕೇಶ್ ಡಿಸೋಜ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್, ಕಾರ್‍ಯಾಧ್ಯಕ್ಷರಾದ ದಾದಾಪೀರ್, ರಾಮಕೃಷ್ಣ, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಮಧುಕುಮಾರ್, ಜಿಲ್ಲಾ ಕಾರ್‍ಯಾಧ್ಯಕ್ಷ ಎಸ್.ಎಲ್. ನಿಖಿಲ್, ಪ್ರಧಾನ ಕಾರ್ಯದರ್ಶಿ ಪ್ರೇಮ್ ಕುಮಾರ್, ಜೆಡಿಎಸ್ ರೈತ ಘಟಕದ ಜಿಲ್ಲಾಧ್ಯಕ್ಷ ದಾನೇಶಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹಮದ್ ಯೂಸುಫ್ ಬೈಯ್ಯಾ, ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ತ್ಯಾಗರಾಜ್, ಪ್ರಧಾನ ಕಾರ್ಯದರ್ಶಿ ಹೆಚ್.ಎಂ. ಸಂಗಯ್ಯ, ಪ್ರಮುಖರಾದ ಸುಬ್ಬೇಗೌಡ, ರಮೇಶ್ ನಾಯ್ಕ, ಸಮದ್, ನಾಗೇಶ್, ಕಾಂತರಾಜ್, ನರಸಿಂಹ ಗಂಧದಮನೆ, ದೀಪಕ್ ಸಿಂಗ್, ಶ್ಯಾಮ್‌ಸುಂದರ್, ವಿನಯ್, ವಿಜಯ್‌ಕುಮಾರ್, ಡಿ. ಕಾಂತರಾಜ್, ಸಂತೋಷ್, ಗೋವಿಂದ, ಅಲ್ತಾಫ್, ಮಹಮದ್ ವಾಜಿದ್, ರಾಜಮ್ಮ, ಲಕ್ಷ್ಮಮ್ಮ, ಸೇರಿದಂತೆ ಇನ್ನಿತರ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
