ಭದ್ರಾವತಿಯಲ್ಲಿ ಅಕ್ರಮಗಳಿಗೆ ಕೊನೆಯೇ ಇಲ್ಲದಂತಾಗಿದೆ: ಕಡಿದಾಳ್ ಆಕ್ರೋಶ

ಶಿವಮೊಗ್ಗ: ಮಹಿಳಾ ಅಧಿಕಾರಿಯ ಮೇಲೆ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರನ ದೌರ್ಜನ್ಯ ಖಂಡಿಸಿ ಫೆ. ೧೪ರ ಶುಕ್ರವಾರ ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಧ್ಯಕ್ಷ ಕಡಿದಾಳ್ ಗೋಪಾಲ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಭದ್ರಾವತಿಯ ಅಕ್ರಮಗಳಿಗೆ ಕೊನೆಯೇ ಇಲ್ಲದಂತಾಗಿದೆ. ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರು ತಕ್ಷಣ ರಾಜೀನಾಮೆ ನೀಡಬೇಕು. ಅವರ ಪುತ್ರ ಬಸವೇಶ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರಲ್ಲದೆ, ಫೆ.೧೪ರ ಶುಕ್ರವಾರ ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಭದ್ರಾವತಿಯ ಮಾಧವಾಚಾರ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.